ಮಂಗಳೂರು:ಮರವೊಂದು ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಕಾರು ಜಖಂಗೊಂಡ ಘಟನೆ ಮಂಗಳೂರು ನಗರದ ಜ್ಯೋತಿ – ಹಂಪನಕಟ್ಟೆ ರಸ್ತೆಯ ರೂಪಾ ಹೋಟೇಲ್ ಬಳಿ ನಡೆದಿದೆ. ಮರ ಬಿದ್ದ ಪರಿಣಾಮ ಕಾರು ಜಖಂಗೊಂಡಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಪಾಂಡೇಶ್ವರ ಅಗ್ನಿಶಾಮಕ ದಳ ಮತ್ತು ಸಂಚಾರಿ ಪೊಲೀಸರು ವಾಹನ ಸಂಚರಿಸಲು ಬದಲಿ ವ್ಯವಸ್ಥೆ ಮಾಡಿ ಮರವನ್ನು ತೆರವು ಮಾಡುವ ಕಾರ್ಯಾಚರಣೆ ಮಾಡಿದರು. ಹಠಾತ್ ಆಗಿ ಮರ ಬಿದ್ದ ಪರಿಣಾಮ ಸುಮಾರು ಒಂದು ಗಂಟೆಗಳ ಕಾಲ ಸಂಚಾರದಲ್ಲಿ ವ್ಯತ್ಯಾಯವುಂಟಾಗಿತ್ತು.
Kshetra Samachara
02/09/2021 09:12 pm