ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಪ್ಪಲಂಗಡಿ: ಕಾರು ಮೋರಿಗೆ ಡಿಕ್ಕಿ ; ಮೂವರಿಗೆ ಗಾಯ

ಕಾಪು : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೆದ್ದಾರಿ ಬದಿಯ ಮೋರಿಗೆ ಡಿಕ್ಕಿಯಾಗಿ ಕಮರಿಗೆ ಉರುಳಿ ಬಿದ್ದು ಮೂವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೊಪ್ಪಲಂಗಡಿ ಹೆದ್ದಾರಿ ಡೈವರ್ಷನ್ ಬಳಿ ರವಿವಾರ ಮಧ್ಯರಾತ್ರಿ ಸಂಭವಿಸಿದೆ.

ಗಾಯಗೊಂಡವರನ್ನು ಮಂಗಳೂರಿನ ಪ್ರತಿಷ್ಠಿತ ಜ್ಯುವೆಲ್ಲರಿ ಮಳಿಗೆಯೊಂದರ ಸಿಬ್ಬಂದಿಗಳೆಂದು ಗುರುತಿಸಲಾಗಿದೆ.ಇವರು ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿ ಉಡುಪಿಗೆ ಮರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಘಟನೆ ಸಂಭವಿಸಿದ ಕೂಡಲೇ ಗಾಯಗೊಂಡವರನ್ನು ಮಧ್ಯರಾತ್ರಿಯಲ್ಲೇ ಸ್ಥಳೀಯರು ಮತ್ತು ಪೊಲೀಸರು ಚಿಕಿತ್ಸೆಗಾಗಿ ಉಡುಪಿಯ ಆಸ್ಪತ್ರೆಗೆ ಸಾಗಿಸಿದ್ದಾರೆ.ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು,ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

Edited By : Shivu K
Kshetra Samachara

Kshetra Samachara

20/09/2021 07:20 pm

Cinque Terre

21.97 K

Cinque Terre

0

ಸಂಬಂಧಿತ ಸುದ್ದಿ