ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಬಳಿ ರಿಕ್ಷಾ, ಟೆಂಪೋ ಮತ್ತು ಕಾರು ನಡುವೆ ಸರಣಿ ಅಪಘಾತ ನಡೆದಿದ್ದು ಮೂರು ವಾಹನಗಳು ಜಖಂಗೊಂಡಿದೆ.
ಹೆದ್ದಾರಿಯಲ್ಲಿ ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಟೆಂಪೋ ಮುಲ್ಕಿ ವಿಜಯ ಸನ್ನಿಧಿ ಕ್ರಾಸ್ ಜಂಕ್ಷನ್ ಬಳಿ ಬಸ್ಸೊಂದನ್ನು ಓವರ್ ಟೇಕ್ ಮಾಡುವ ರಭಸದಲ್ಲಿ ಕಾರ್ನಾಡ್ ಕಡೆಯಿಂದ ಮುಲ್ಕಿ ಕಡೆಗೆ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭ ಟೆಂಪೋ ಹಿಂದುಗಡೆ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಟೆಂಪೋ ಹಿಂಭಾಗಕ್ಕೆ ದಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಕಾರಿನ ಎದುರು ಭಾಗ ಸಂಪೂರ್ಣ ಜಖಂಗೊಂಡಿದೆ.
ಅಪಘಾತದಿಂದ ಕೆಲಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು ಮುಲ್ಕಿ ಪೊಲೀಸರು ಸ್ಥಳಕ್ಕೆ ಧಾವಿಸಿ ವಾಹನಗಳನ್ನು ತೆರವುಗೊಳಿಸಿದ್ದಾರೆ.
ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿ ನಡೆದಿದ್ದು ಸೂಕ್ತ ಸರ್ವಿಸ್ ರಸ್ತೆ ಇಲ್ಲದೆ ಅನೇಕ ಅಪಘಾತಗಳು ಸಂಭವಿಸಿದ್ದು ಕೂಡಲೇ ಸರ್ವಿಸ್ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.
Kshetra Samachara
04/10/2021 05:45 pm