ಕಾಪು: ಚಾಲಕನ ನಿಯಂತ್ರಣ ತಪ್ಪಿ ಟೆಂಪೋವೊಂದು ಹೆದ್ದಾರಿ ವಿಭಜಕಕ್ಕೆ ಡಿಕ್ಕಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಉದ್ಯಾವರ ಸೇತುವೆ ಬಳಿ ಸಂಭವಿಸಿದೆ.
ಮಂಗಳೂರಿನಿಂದ ಉಡುಪಿಯತ್ತ ಚಲಿಸುತ್ತಿದ್ದ ಟೆಂಪೋ, ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರ ಸೇತುವೆ ಬಳಿ
ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ವಿಭಜಕಕ್ಕೆ ಡಿಕ್ಕಿಯಾಗಿದೆ.ಪರಿಣಾಮ ಚಾಲಕನ ಕೈಮುರಿದು ಗಂಭೀರವಾಗಿ ಗಾಯಗೊಂಡಿದ್ದಾನೆ.ಘಟನೆಯಿಂದ ವಾಹನ ಸಂಚಾರಕ್ಕೆ ತೊಡಕು ಉಂಟಾಗಿದ್ದು,ಕಾಪು ಠಾಣಾ ಪೊಲೀಸರು ಸ್ಥಳಕ್ಕೆ ದಾವಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.
Kshetra Samachara
09/10/2021 08:21 am