ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಕಾರಿನಲ್ಲಿದ್ದ ನಾಲ್ವರು ಅದೃಷ್ಟವಷಾತ್ ಪ್ರಾಣಪಾಯದಿಂದ ಪಾರು..

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪದ ಅಡ್ಕಾರಿನಲ್ಲಿ ಸಂಭವಿಸಿದೆ.

ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಟೊಯೋಟ ಕಾರು, ಚಾಲಕನ ನಿಯಂತ್ರಣ ತಪ್ಪಿ ಅಡ್ಕಾರು ಬಳಿ ಪಲ್ಟಿಯಾಗಿದೆ. ಕಾರು ಅತೀ ವೇಗದಲ್ಲಿದ್ದ ಕಾರಣ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ 4 ಮಂದಿಗೆ ಗಾಯಗಳಾಗಿದೆ. ಅದೃಷ್ಟವಷಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇದೇ ಸ್ಥಳದಲ್ಲಿ ವರ್ಷದ ಹಿಂದೆ ಮಡಿಕೇರಿಯಿಂದ ಮಂಗಳೂರಿಗೆ ಬಂದು ವಾಪಾಸಾಗುತ್ತಿದ್ದ ಒಂದೇ ಕುಟುಂಬದ 4 ಮಂದಿ ಅಪಘಾತಕ್ಕೆ ಬಲಿಯಾಗಿದ್ದರು. ಅದಾದ ಕೆಲ ತಿಂಗಳ ನಂತರ ಮತ್ತೊಂದು ಭೀಕರ ಅಪಘಾತದಲ್ಲಿ, ಮದುವೆ ನಿಶ್ಚಯವಾಗಿದ್ದ ಇಬ್ಬರು ಯುವಕರ ಸಹಿತ ಯುವತಿಯೊಬ್ಬಳು ದಾರುಣ ಮೃತಪಟ್ಟಿದ್ದರು. ಇಲ್ಲಿ ಅಪಘಾತ ತಡೆಗೆ ಬ್ಯಾರಿಕೇಡ್ ಹಾಕಿದ್ದರೂ ಕೂಡ ಪದೇ ಪದೇ ಅದೇ ಸ್ಥಳದಲ್ಲಿ ಅಪಘಾತ ಸಂಭವಿಸುತ್ತಿರುವುದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

Edited By : Shivu K
Kshetra Samachara

Kshetra Samachara

18/10/2021 04:13 pm

Cinque Terre

10.34 K

Cinque Terre

0

ಸಂಬಂಧಿತ ಸುದ್ದಿ