ಕಡಬ: ತಾಲೂಕಿನ ನೂಜಿಬಾಳ್ತಿಲ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಮಾಡುವ ಸಂದರ್ಭ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹಬ್ಬಿದ್ದು, ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದೆ.
ಇಂದು ಬೆಳಗ್ಗೆ ಈ ಶಾಲೆಯಲ್ಲಿ ಅಡುಗೆ ತಯಾರಿ ಸಂದರ್ಭ ಕೊಠಡಿಯಲ್ಲಿ ಗ್ಯಾಸ್ ಉರಿಸುವ ವೇಳೆ ಸಿಲಿಂಡರ್‌ನ ಪೈಪ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಏಕಾಏಕಿ ಬೆಂಕಿ ತಗುಲಿದೆ. ಕೂಡಲೇ ಸ್ಥಳದಲ್ಲಿದ್ದವರು ಕಾರ್ಯ ಪ್ರವೃತ್ತರಾಗಿ ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ. ನಂತರ ಬೆಂಕಿ ತಗುಲಿದ ಸಿಲಿಂಡರ್ ನ್ನು ಶಾಲಾ ಕಟ್ಟಡದಿಂದ ಹೊರಗೆ ತಂದಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Kshetra Samachara
25/10/2021 09:26 pm