ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಪರಿಚಿತ ವಾಹನ ಡಿಕ್ಕಿ ಮೇಲ್ಸೇತುವೆಯಿಂದ ಬಿದ್ದು ಸವಾರ ಮೃತ್ಯು

ಉಳ್ಳಾಲ: ಅಪರಿಚಿತ ವಾಹನವೊಂದು ಡಿಕ್ಕಿ‌‌ ಹೊಡೆದ ಪರಿಣಾಮ ತೊಕ್ಕೊಟ್ಟು ಮೇಲ್ಸೇತುವೆಯಿಂದ ಕೆಳಗೆ ಬಿದ್ದು ಬುಲೆಟ್ ಸವಾರ ಮೃತಪಟ್ಟ ಘಟನೆ ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಬುಧವಾರ ಸಂಜೆ ವೇಳೆ ನಡೆದಿದೆ.

ನಗರದ ಕುಂಪಲ ಸರಳಾಯ ಕಾಲೊನಿ ನಿವಾಸಿ ಸುಬ್ರಹ್ಮಣ್ಯ ರಾವ್ (50) ಮೃತಪಟ್ಟ ದುರ್ದೈವಿ. ಮಂಗಳೂರಿನಿಂದ ಕುಂಪಲದ ಕಡೆಗೆ ಸುಬ್ರಹ್ಮಣ್ಯ ರಾವ್ ಅವರು ಬುಲೆಟ್ ಬೈಕ್ ನಲ್ಲಿ ಬರುತ್ತಿದ್ದ ಸಂದರ್ಭ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಬುಲೆಟ್ ಮೇಲ್ಸೇತುವೆ​​ಗೆ ಡಿಕ್ಕಿ ಹೊಡೆದು ಸವಾರ ಸುಬ್ರಹ್ಮಣ್ಯ ಅವರು ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸುಬ್ರಹ್ಮಣ್ಯ ರಾವ್ ಸಿವಿಲ್ ಗುತ್ತಿಗೆದಾರರಾಗಿದ್ದು, 15 ವರ್ಷಗಳಿಂದ ದುಬೈನಲ್ಲಿ ಉದ್ಯೋಗದಲ್ಲಿದ್ದರು. ಊರಿಗೆ ಬಂದ ಬಳಿಕ ಸಿವಿಲ್ ಗುತ್ತಿಗೆದಾರರಾಗಿ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಮೃತರು ತಾಯಿ, ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ನಾಗೋರಿ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

28/10/2021 10:26 am

Cinque Terre

8.8 K

Cinque Terre

0

ಸಂಬಂಧಿತ ಸುದ್ದಿ