ಮುಲ್ಕಿ: ಕಿನ್ನಿಗೋಳಿ- ಮೂಡುಬಿದಿರೆ ರಾಜ್ಯ ಹೆದ್ದಾರಿಯ ಮೂರುಕಾವೇರಿ ಬಳಿ ಸವಾರನ ನಿಯಂತ್ರಣ ತಪ್ಪಿದ ಸ್ಕೂಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಬಿದ್ದಿದ್ದು, ಸವಾರ ಹಾಗೂ ಸಹಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಾಳುಗಳನ್ನು ಮೂಡುಬಿದಿರೆ ಅಶ್ವತ್ಥಪುರ ನಿವಾಸಿಗಳಾದ ದಾಮೋದರ ಮತ್ತು ಮಾಧವ ಗೌಡ ಎಂದು ಗುರುತಿಸಲಾಗಿದೆ.
ಸ್ಕೂಟರ್ ಸವಾರರು ಕಿನ್ನಿಗೋಳಿ ಕಡೆಯಿಂದ ಮೂಡುಬಿದಿರೆ ಕಡೆಗೆ ಹೋಗುತ್ತಿದ್ದು, ಮೂರು ಕಾವೇರಿ ಬಳಿ ಏಕಾಏಕಿ ಸ್ಕೂಟರ್ ಸವಾರನ ನಿಯಂತ್ರಣ ತಪ್ಪಿ, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಬಿದ್ದಿದೆ.
ಈ ಸಂದರ್ಭ ಇಬ್ಬರಿಗೂ ಅಲ್ಪಸ್ವಲ್ಪ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸುರತ್ಕಲ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Kshetra Samachara
09/11/2021 06:06 pm