ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಟ್ಯಾಂಕರ್ ಡಿಕ್ಕಿಯಾಗಿ ಸ್ಕೂಟರ್ ಸವಾರ ಉದ್ಯಮಿ ಸಾವು

ಮಂಗಳೂರು: ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನಗರದ ಪಣಂಬೂರು ವೃತ್ತ ಬಳಿ ಇಂದು ನಡೆದಿದೆ.

ಮೃತರನ್ನು ಕೂಳೂರು ನಿವಾಸಿ, ಉದ್ಯಮಿ ಯು.ಕೆ.ಅಬ್ದುರ್ರಹೀಂ(63) ಎಂದು ಗುರುತಿಸಲಾಗಿದೆ. ಅಬ್ದುರ್ರಹೀಂ ತಮ್ಮ ಮನೆಯಿಂದ ಸ್ಕೂಟರ್‌ನಲ್ಲಿ ಬೈಕಂಪಾಡಿ ಕಡೆಗೆ ಹೋಗುತ್ತಿದ್ದರು. ಈ ಸಂದರ್ಭ ಟ್ಯಾಂಕರ್ ಅವರ ಸ್ಕೂಟರ್ ಗೆ ಡಿಕ್ಕಿ ಹೊಡೆದಿದ್ದು, ರಸ್ತೆಗೆ ಬಿದ್ದ ಅವರು ಗಂಭೀರ ಗಾಯಗೊಂಡಿದ್ದರು.‌ ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ, ಆಸ್ಪತ್ರೆಗೆ ತಲುಪುವ ಮುನ್ನವೇ ಮೃತಪಟ್ಟಿದ್ದಾರೆ.

ಮೃತರು ಪತ್ನಿ, ನಾಲ್ವರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ‌.‌ ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

11/11/2021 10:08 pm

Cinque Terre

19.62 K

Cinque Terre

1

ಸಂಬಂಧಿತ ಸುದ್ದಿ