ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಜಂಕ್ಷನ್ ಬಳಿ ಕಾರಿನ ಟಯರ್ ಸ್ಫೋಟಗೊಂಡಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮೂವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಉಡುಪಿಯ ಉಚ್ಚಿಲದಿಂದ ಸುರತ್ಕಲ್ ಸಮೀಪದ ಕೃಷ್ಣಾಪುರ ಕಡೆಗೆ ಹೋಗುತ್ತಿದ್ದ ಕಾರು, ಹಳೆಯಂಗಡಿ ಚರ್ಚ್ ಬಳಿ ಟಯರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿದ್ದು, ಚಾಲಕ ಸಿದ್ಧಿಕ್ ಸಹಿತ ಫಾರೂಕ್, ಶಾರಿಕ್ ಪಾರಾಗಿದ್ದಾರೆ.
ಅಪಘಾತದಿಂದಾಗಿ ಕೆಲಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಕೂಡಲೇ ಧಾವಿಸಿದ ಸ್ಥಳೀಯರು ಹೆದ್ದಾರಿ ಸಂಚಾರ ಸುಗಮಗೊಳಿಸಿದರು.
ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು, ಟ್ರಾಫಿಕ್ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ.
Kshetra Samachara
13/11/2021 02:32 pm