ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಹೆದ್ದಾರಿ ಬದಿ 30 ಅಡಿ ಆಳಕ್ಕೆ ಉರುಳಿದ ಟ್ಯಾಂಕರ್; ಚಾಲಕ ಪಾರು

ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ಕಳೆದು ಕೊಂಡು ಹೆದ್ದಾರಿ ಬದಿಯ 30 ಅಡಿ ಅಳಕ್ಕೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ.

ಬೆಂಗಳೂರು ಕಡೆಯಿಂದ ಗ್ಯಾಸ್ ಖಾಲಿ ಮಾಡಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆಯಿಂದ ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಪ್ರಪಾತದಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ರಕ್ಷಿಸಿದ್ದು, ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

Edited By : Vijay Kumar
Kshetra Samachara

Kshetra Samachara

14/11/2021 10:27 pm

Cinque Terre

6.89 K

Cinque Terre

0