ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಂಜದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ:ಹೊತ್ತಿ ಭಸ್ಮವಾದ ಕಾರು

ಸುಳ್ಯ : ಸುಳ್ಯ ತಾಲೂಕಿನ ಬಳ್ಪ ಸಮೀಪದ ಪಾದೆ ಎಂಬಲ್ಲಿ ಬುಧವಾರ ಸಂಜೆ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ವರದಿಯಾಗಿದೆ.

ಪಂಜದ ಕೇಶವ ಆಚಾರ್ಯ ಎಂಬವರು ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಕಾರಿನ ಬಾನೆಟ್ಟಿನಲ್ಲಿ ಹೊಗೆ ಕಾಣಿಸಿಕೊಂಡಿತ್ತು. ಕಾರಿನಿಂದ ಇಳಿದು ನೋಡುವಷ್ಟರಲ್ಲಿ ಬೆಂಕಿಯ ಕೆನ್ನಾಲಿಗೆಗೆ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆಯಿಂದ ಪಂಜ - ಸುಬ್ರಹ್ಮಣ್ಯ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.

Edited By : Shivu K
Kshetra Samachara

Kshetra Samachara

24/11/2021 10:25 pm

Cinque Terre

21.43 K

Cinque Terre

0