ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು : ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗಳಿಗೆ ನುಗ್ಗಿದ ಕಾರು

ಕಾಪು : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಂಗಡಿಗಳಿಗೆ ಗುದ್ದಿದ ಘಟನೆ ಕಾಪು ಮಲ್ಲಾರು ಸ್ವಾಗತ ನಗರ ಬಳಿ ನಡೆದಿದೆ. ಶಿರ್ವದಿಂದ ಕಾಪು ಕಡೆಗೆ ಬರುತ್ತಿದ್ದ ಕುಂದಾಪುರ ನಿವಾಸಿಯ ಹೊಸ ಕಾರು ಸ್ವಾಗತ ನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗಳಿಗೆ ಗುದ್ದಿದೆ.

ಡಿಕ್ಕಿಯ ರಭಸಕ್ಕೆ ಅಂಗಡಿಯ ಗೋಡೆಗಳು ಕುಸಿದು ಬಿದ್ದಿದ್ದು ಸಣ್ಣ ಪುಟ್ಟ ಗಾಯಗಳಿಂದ ಅಂಗಡಿ ಮಾಲೀಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Shivu K
Kshetra Samachara

Kshetra Samachara

25/11/2021 11:17 am

Cinque Terre

17.56 K

Cinque Terre

1