ಕಾಪು:ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುವಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಂದು ನಡೆದಿದೆ.
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಲ್ಲಾರು ಗ್ರಾಮದ ಕುಡ್ತಿಮಾರು ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಫಕೀರಣಕಟ್ಟೆ ಎಂ.ಜೆ.ಎಂ ಮಸೀದಿ ಹತ್ತಿರದ ನಿವಾಸಿ ಅಬ್ದುಲ್ ರಜಾಕ್ (48) ಸಾವಿಗೀಡಾದ ನತದೃಷ್ಟರಾಗಿದ್ದಾರೆ.ಇವರು ರೈಲ್ವೇ ಹಳಿಯಲ್ಲಿ ನಡೆದುಕೊಂಡು ಹೋಗುವಾಗ ಉಡುಪಿಯಿಂದ ಮಂಗಳೂರು ಕಡೆಗೆ ಹೋಗುವ ರೈಲು ಡಿಕ್ಕಿ ಹೊಡೆದಿದ್ದು ಗಂಭೀರ ಗಾಯಗೊಂಡ ರಜಾಕ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ . ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
27/11/2021 02:07 pm