ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಸಮೀಪದ ಪಾವಂಜೆ ಚೇಳಾಯರು ಕ್ರಾಸ್ ಬಳಿ ಕಾರುಗಳ ನಡುವೆ ಅಪಘಾತ ಸಂಭವಿಸಿ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರಿಗೆ ಪಾವಂಜೆ ಚೇಳಾಯರು ಕ್ರಾಸ್ ಬಳಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಎರಡೂ ಕಾರುಗಳಿಗೆ ಹಾನಿಯಾಗಿದ್ದು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ.
ಈ ಸಂದರ್ಭ ಸ್ಥಳಕ್ಕೆ ಧಾವಿಸಿದ ಟ್ರಾಫಿಕ್ ಪೊಲೀಸರು ಹಾಗೂ ಸ್ಥಳೀಯರು ಕಾರನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರ ಪಾವಂಜೆ ಚೇಳಾಯರು ಕ್ರಾಸ್ ಬಳಿ ಅವೈಜ್ಞಾನಿಕ ಹೆದ್ದಾರಿ ಡಿವೈಡರ್ ನಿಂದ ಅನೇಕ ಅಪಘಾತಗಳು ಈ ಮೊದಲು ನಡೆದಿದೆ.
ಹೆದ್ದಾರಿ ಡಿವೈಡರ್ ನಲ್ಲಿ ಏಕಾಏಕಿ ವಾಹನಗಳು ತಿರುವು ಪಡೆದುಕೊಳ್ಳುವಾಗ ಸೂಚನೆ ನೀಡದೆ ಗೊಂದಲಮಯ ವಾತಾವರಣ ಉಂಟಾಗಿ ಅಪಘಾತಗಳು ಸಂಭವಿಸುತ್ತಿದ್ದು, ಕೂಡಲೇ ಡಿವೈಡರ್ ಮುಚ್ಚುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
Kshetra Samachara
27/11/2021 02:13 pm