ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು: ನಿಂತಿದ್ದ ಟಿಪ್ಪರ್ ಗೆ ಗುದ್ದಿ ಕಾರು ಅಪ್ಪಚ್ಚಿ; ಚಾಲಕ ಗಂಭೀರ

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಬಳಿ ನಿಂತಿದ್ದ ಟಿಪ್ಪರ್ ಲಾರಿಗೆ ಇಕೋ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ತೀವ್ರವಾಗಿ ಗಾಯಗೊಂಡ ಘಟನೆ ಕಾಪು ಮೂಳೂರು ಸಿಎಸ್ಐ ಚರ್ಚ್ ಬಳಿ ನಡೆದಿದೆ.

ಚಾಲಕ ಟಿಪ್ಪರನ್ನು ಹೆದ್ದಾರಿ ಪಕ್ಕ ನಿಲ್ಲಿಸಿ ಊಟಕ್ಕೆ ತೆರಳಿದ್ದ. ಈ ಸಂದರ್ಭ ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಕಾಪುವಿನ ರವಿ ಎಂಬವರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯ ಹಿಂಬದಿಗೆ ಗುದ್ದಿಯೇ ಬಿಟ್ಟಿದೆ.

ಡಿಕ್ಕಿಯಾದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ರವಿ ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಕಾರಿನಿಂದ ರವಿಯವರನ್ನು ಪ್ರಯಾಸದಿಂದ ಹೊರ ತೆಗೆದು, ಉಡುಪಿಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Shivu K
Kshetra Samachara

Kshetra Samachara

29/11/2021 05:48 pm

Cinque Terre

9.75 K

Cinque Terre

0

ಸಂಬಂಧಿತ ಸುದ್ದಿ