ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ಸು ನಿಲ್ದಾಣದ ಸಮೀಪ ಸರ್ವಿಸ್ ರಸ್ತೆಯಲ್ಲಿ ಬಸ್ಸಿನ ಹಿಂಭಾಗಕ್ಕೆ ಬೈಕ್ ಸವಾರ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ಅಲ್ಪಸ್ವಲ್ಪ ಗಾಯಗಳೊಂದಿಗೆ ಪವಾಡಸದೃಶ ಪಾರಾಗಿದ್ದಾನೆ.
ಮುಲ್ಕಿಯಿಂದ ಕಿನ್ನಿಗೋಳಿಗೆ ಹೋಗುತ್ತಿದ್ದ ಸರ್ವಿಸ್ ಬಸ್ ನಿಲ್ದಾಣದಿಂದ ಹೊರಟು ಜಂಕ್ಷನ್ ಬಳಿ ಯುಟರ್ನ್ ಹೊಡೆಯುತ್ತಿದ್ದಂತೆ ಸರ್ವಿಸ್ ರಸ್ತೆಯಲ್ಲಿ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬೈಕ್ ಸವಾರ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾನೆ.
ಅಪಘಾತದ ರಭಸಕ್ಕೆ ಬೈಕ್ ಸವಾರ ಎಸೆಯಲ್ಪಟ್ಟು ಅಲ್ಪಸ್ವಲ್ಪ ಗಾಯಗಳೊಂದಿಗೆ ಪವಾಡಸದೃಶ ಪಾರಾಗಿದ್ದಾನೆ.
ಬೈಕ್ ಸವಾರ ಬಸ್ಸಿಗೆ ಡಿಕ್ಕಿ ಹೊಡೆದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Kshetra Samachara
01/12/2021 03:42 pm