ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: ಹೆದ್ದಾರಿ ದಾಟುತ್ತಿದ್ದಾಗ ವಾಹನ ಡಿಕ್ಕಿ ಹೊಡೆದು ಪರಾರಿ; ಮಹಿಳೆ ಗಂಭೀರ

ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಸಮೀಪದ ಹೊನ್ನಕಟ್ಟೆ ಜಂಕ್ಷನ್ ಬಳಿ ಇಂದು ಮುಂಜಾವ ಹೆದ್ದಾರಿ ದಾಟುತ್ತಿದ್ದ ಮಹಿಳೆಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ.

ಹೊನ್ನಕಟ್ಟೆ ನಿವಾಸಿ ಶಶಿಕಲಾ (54) ಗಾಯಾಳು ಮಹಿಳೆ. ಅಪಘಾತದಿಂದಾಗಿ ಕೆಲಹೊತ್ತು ಮಹಿಳೆ ಹೆದ್ದಾರಿಯಲ್ಲೇ ಬಿದ್ದಿದ್ದರು. ಬಳಿಕ ಸ್ಥಳೀಯರು ಕಂಡು ಕೂಡಲೇ ಕಾರ್ಯಪ್ರವೃತ್ತರಾಗಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಸುರತ್ಕಲ್ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.ಈ ಭಾಗದಲ್ಲಿ ಡಿವೈಡರ್ ಮೇಲೆಯೇ ಪೊದೆ ದಟ್ಟವಾಗಿ ಬೆಳೆದಿದ್ದು, ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

11/12/2021 09:49 am

Cinque Terre

5.78 K

Cinque Terre

0