ಪಡುಬಿದ್ರೆ: ಟಯರ್ ಬ್ಲಾಸ್ಟ್ ಆಗಿ ಮೀನು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ನಡೆದಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ, ಪಡುಬಿದ್ರಿಯ ಹೆದ್ದಾರಿಯಲ್ಲಿ ಹೋಗುತ್ತಿದ್ದಂತೆ ಇದ್ದಕ್ಕಿದ್ದಂತೆ ಲಾರಿಯ ಟಯರ್ ಬ್ಲಾಸ್ಟ್ ಆಗಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಲಾರಿ ಪಲ್ಟಿಯಾಗಿದೆ.
ಅಪಘಾತದ ತೀವ್ರತೆಗೆ ಲಾರಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,ಲಾರಿಯನ್ನು ಕ್ರೇನ್ ಬಳಸಿ ಮೇಲಕ್ಕೆ ಎತ್ತಲಾಯಿತು. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
11/12/2021 12:54 pm