ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಟೆಂಪೋಗೆ ಮೀನಿನ ಲಾರಿ ಡಿಕ್ಕಿ ಹೆದ್ದಾರಿ ಸಂಚಾರ ಅಸ್ತವ್ಯಸ್ತ

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಬಪ್ಪನಾಡು ಜಂಕ್ಷನ್ ಬಳಿ ಮೀನಿನ ಲಾರಿ ಯು ಟೆಂಪೋಗೆ ಡಿಕ್ಕಿಹೊಡೆದು ಅಪಘಾತ ಸಂಭವಿಸಿದೆ.

ಉಡುಪಿ ಕಡೆ ಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಮೀನಿನ ಟೆಂಪೋ ರಾಷ್ಟ್ರೀಯ ಹೆದ್ದಾರಿ ಮುಲ್ಕಿ ಸಮೀಪದ ಬಪ್ಪನಾಡು ದೇವಸ್ಥಾನದ ದ್ವಾರದ ಬಳಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಕ್ಯಾಟರಿಂಗ್ ಸಾಗಿಸುತ್ತಿದ್ದ ಟೆಂಪೋಗೆ ಡಿಕ್ಕಿ ಹೊಡೆದಿದೆ.

ಅಪಘಾತದಿಂದ ಎರಡು ವಾಹನಗಳು ಜಖಂಗೊಂಡಿದ್ದು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತು.ಕೂಡಲೇ ಮುಲ್ಕಿ ನಗರ ಪಂಚಾಯತ್ ಸದಸ್ಯ ಬಾಲಚಂದ್ರ ಕಾಮತ್ ಮುಲ್ಕಿ ಪೊಲೀಸ್ ಇನ್ಸ್ಪೆಕ್ಟರ್ ಕುಸುಮಾಧರ ಧಾವಿಸಿ ಅಪಘಾತಕ್ಕೀಡಾದ ಎರಡು ವಾಹನಗಳನ್ನು ಬದಿಗೆ ಸರಿಸಿ ಹೆದ್ದಾರಿ ಸಂಚಾರ ಸುಗಮಗೊಳಿಸಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಅರ್ಧಂಬರ್ಧ ಸೂಕ್ತ ಸರ್ವಿಸ್ ರಸ್ತೆ ಇಲ್ಲದೆ ಬಪ್ಪನಾಡು ಜಂಕ್ಷನ್, ಮುಲ್ಕಿ ಬಸ್ಸು ನಿಲ್ದಾಣ, ವಿಜಯ ಸನ್ನಿಧಿ ಜಂಕ್ಷನ್ ಬಳಿ ಅನೇಕ ಅಪಘಾತಗಳು ಸಂಭವಿಸಿದ್ದು ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಕೂಡಲೇ ಹೆದ್ದಾರಿ ಸರ್ವಿಸ್ ರಸ್ತೆ ಕಾಮಗಾರಿಯನ್ನು ಪೂರ್ತಿ ಗೊಳಿಸಬೇಕೆಂದು ಮುಲ್ಕಿ ಆಟೋಚಾಲಕ ಮೋಹನ್ ಕುಬೆವೂರು ರವರು ಹೆದ್ದಾರಿ ಇಲಾಖೆಯ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

12/12/2021 12:51 pm

Cinque Terre

11.64 K

Cinque Terre

0