ನೆಲ್ಯಾಡಿ: ಬೈಕ್ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್‌ನಲ್ಲಿದ್ದ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಸಮೀಪದ ಸಣ್ಣಂಪಾಡಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಇಚ್ಲಂಪಾಡಿ ಗ್ರಾಮದ ಮಾನಡ್ಕ ನಿವಾಸಿ ಜಾರ್ಜ್- ಝಾನ್ಸಿ ದಂಪತಿ ಪುತ್ರ ಅಲ್ವಿನ್ (23) ಮೃತಪಟ್ಟವರು. ನೆಲ್ಯಾಡಿ ಗ್ರಾಮದ ಪಡಡ್ಕ ನಿವಾಸಿ ಸೆಬಿನ್ ಗಂಭೀರ ಗಾಯಗೊಂಡಿದ್ದಾರೆ. ಸೆಬಿನ್ ನೆಲ್ಯಾಡಿಯಲ್ಲಿ ಕೊರಿಯರ್ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದು, ರಾತ್ರಿ ಅಲ್ವಿನ್ ಹಾಗೂ ಸೆಬಿನ್ ಕೊರಿಯರ್ ಪಾರ್ಸೆಲ್ ಹಿಡಿದುಕೊಂಡು ನೆಲ್ಯಾಡಿಯಿಂದ ಉಪ್ಪಿನಂಗಡಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಘಟಿಸಿದೆ.
ಇವರ ಬೈಕ್ ಹಾಗೂ ಮಂಗಳೂರಿನಿಂದ ಹಾಸನ ಕಡೆಗೆ ಹೋಗುತ್ತಿದ್ದ ಲಾರಿ ಮಧ್ಯೆ ಸಣ್ಣಂಪಾಡಿಯಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರರಿಬ್ಬರೂ ಗಂಭೀರ ಗಾಯಗೊಂಡರು. ಇಬ್ಬರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಗಂಭೀರ ಗಾಯಗೊಂಡಿದ್ದ ಅಲ್ವಿನ್ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.
Kshetra Samachara
14/12/2021 12:10 pm