ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಪೊಲೀಸರಿಂದ ತಪ್ಪಿಸಿಕೊಳ್ಳುವ ಧಾವಂತ: ವಿದ್ಯಾರ್ಥಿನಿಗೆ ಢಿಕ್ಕಿ ಹೊಡೆದು ಸವಾರ ಪರಾರಿ!

ಕುಂದಾಪುರ: ಟ್ರಾಫಿಕ್ ಪೋಲಿಸರಿಂದ ತಪ್ಪಿಸಿಕೊಳ್ಳುವ ಧಾವಂತದಲ್ಲಿ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರನೊಬ್ಬ ಪರಾರಿಯಾದ ಘಟನೆ ಕುಂದಾಪುರದಲ್ಲಿ ನಡೆದಿದೆ. ಈತ ಹೆಲ್ಮೆಟ್ ಹಾಕಿಕೊಳ್ಳದೆ ರಾಂಗ್ ಸೈಡಿನಿಂದ ಬರುತ್ತಿದ್ದ.ಎದುರಿನಿಂದ ಬಂದ ಟ್ರಾಫಿಕ್ ಇಂಟರ್ ಸೆಪ್ಟರ್ ಪೊಲೀಸ್ ವಾಹನವನ್ನು ಕಂಡು ವಿದ್ಯಾರ್ಥಿನಿಯೋರ್ವಳಿಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.ಹೊಸಬಸ್ ನಿಲ್ದಾಣ ಸಮೀಪ ಈ ಘಟನೆ ನಡೆದಿದ್ದು, ಏಕ ಮುಖ ಸಂಚಾರದ ಮುಖ್ಯರಸ್ತೆಯಲ್ಲಿ ವಿರುಧ್ಧ ದಿಕ್ಕಿನಿಂದ ಹೆಲ್ಮೆಟ್ ಧರಿಸದೇ ಬರುತ್ತಿದ್ದ ಈ ಸ್ಕೂಟರ್ ಸವಾರ ಬರುತ್ತಿದ್ದ.ಇದನ್ನು ಕಂಡು ಟ್ರಾಫಿಕ್ ಇಂಟರ್ ಸೆಪ್ಟರ್ ನಲ್ಲಿ ಸಾಗುತ್ತಿದ್ದ ಪೊಲೀಸರು ಸ್ಕೂಟರನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ .

ಆದರೆ ಪೊಲೀಸರನ್ನು ಕಂಡೊಡನೆ ಸ್ಕೂಟರ್ ವೇಗವನ್ನು ಹೆಚ್ಚಿಸಿದ ಸವಾರ ತಪ್ಪಿಸಿಕೊಳ್ಳುವ ಭರದಲ್ಲಿ ಎದುರಿನಿಂದ ಸಾಗುತ್ತಿದ್ದ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದು ರಾಮ ಮಂದಿರ ರಸ್ತೆಯ ಮೂಲಕ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾನೆ. ರಸ್ತೆಗೆ ಉರುಳಿದ ವಿದ್ಯಾರ್ಥಿನಿ ನಡೆದ ಘಟನೆಯಿಂದ ಬೆಚ್ಚಿ ಬಿದ್ದಿದ್ದು ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾಳೆ.ಸದ್ಯ ಸಿಸಿ ಕ್ಯಾಮೆರಾ ಫೂಟೇಜ್ ಪರಿಶೀಲಿಸುತ್ತಿರುವ ಪೊಲೀಸರು ಸವಾರನ ಹುಡುಕಾಟದಲ್ಲಿ ತೊಡಗಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

20/12/2021 05:25 pm

Cinque Terre

9.59 K

Cinque Terre

2

ಸಂಬಂಧಿತ ಸುದ್ದಿ