ಬಜಪೆ: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಗುರುಪುರ ಸೇತುವೆ ಬಳಿ ನಿನ್ನೆ ರಾತ್ರಿ ನಡೆದಿದೆ.
ನಿನ್ನೆ ರಾತ್ರಿ 11ರ ಸುಮಾರಿಗೆ ಮಂಗಳೂರು ಕಡೆಗೆ ಅತೀ ವೇಗ ಹಾಗೂ ಚಾಲಕನ ನಿರ್ಲಕ್ಷ್ಯತನದಿಂದ ಧಾವಿಸುತ್ತಿದ್ದ ಇನ್ನೋವಾ ಕಾರು ಎದುರು ದಿಕ್ಕಿನಿಂದ ಗುರುಪುರದತ್ತ ಸಾಗುತ್ತಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಐವರಿಗೆ ಗಂಭೀರ ಗಾಯವಾಗಿದ್ದು, ಮಹಿಳೆಯರಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಸ್ವಿಫ್ಟ್ ಕಾರಿನಲ್ಲಿದ್ದವರು ಗುರುಪುರದಲ್ಲಿ ನಿಧನರಾದ ತಮ್ಮ ಸಂಬಂಧಿಕರ ಮನೆಗೆ ಹೋಗುತ್ತಿದ್ದರು. ಅಪಘಾತ ನಡೆದ ಕೂಡಲೇ ಯುವಕರ ತಂಡ ಧಾವಿಸಿ ನಜ್ಜುಗುಜ್ಜಾಗಿದ್ದ ಸ್ವಿಫ್ಟ್ ಕಾರಿನೊಳಗಿದ್ದ ಗಾಯಾಳುಗಳನ್ನು ಹೊರತೆಗೆದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸುವಲ್ಲಿ ಪೊಲೀಸರು ಹಾಗೂ ಗಾಯಾಳುಗಳ ಸಂಬಂಧಿಕರಿಗೆ ಸಹಕರಿಸಿದರು. ಅಪಘಾತ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Kshetra Samachara
31/12/2021 07:16 pm