ಕಾಪು: ಖಾಸಗಿ ಎಕ್ಸ್ ಪ್ರೆಸ್ ಬಸ್ ಡಿಕ್ಕಿ ಹೊಡೆದು ಮೂಳೂರು ನಿವಾಸಿ ರಮೇಶ್ ಕರ್ಕೇರ ಎಂಬವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ರಾತ್ರಿ ಸಂಭವಿಸಿದೆ.
ಮೂಳೂರು ಬೀಚ್ ಬಳಿಯ ನಿವಾಸಿ ರಮೇಶ್ ಕರ್ಕೇರ ಅವರು ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಬಸ್ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ವೇಳೆ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಎಕ್ಸ್ಪ್ರೆಸ್ ಬಸ್ ಡಿಕ್ಕಿ ಹೊಡೆದಿದೆ.
ಅಪಘಾತದಿಂದಾಗಿ ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಕಾಪು ಪೊಲೀಸರು ಮತ್ತು ಸ್ಥಳೀಯರು ಸಕಾಲಿಕ ಕಾರ್ಯಾಚರಣೆ ನಡೆಸಿ ರಸ್ತೆ ಸಂಚಾರ ಸುಗಮಗೊಳಿಸಿದರು. ಕಾಪು ಎಸ್ಸೈ ರಾಘವೇಂದ್ರ ಸಿ., ಎಎಸ್ಐ ಗೋಪಾಲ ಶೆಟ್ಟಿಗಾರ್ ಹಾಗೂ ಸಿಬಂದಿ ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದರು.
Kshetra Samachara
01/01/2022 10:20 pm