ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ತಡರಾತ್ರಿ ಹೊತ್ತಿ ಉರಿದ ಮರದ ಮಿಲ್; ಲಕ್ಷಾಂತರ ಮೌಲ್ಯದ ದಿಮ್ಮಿಗಳು ಅಗ್ನಿಗಾಹುತಿ

ಕುಂದಾಪುರ: ಮರದ ಮಿಲ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಿ.ಹೆಚ್.ಎಂ. ರಸ್ತೆಯಲ್ಲಿ ಸಂಭವಿಸಿದೆ.

ಮಿಲ್ ನಲ್ಲಿ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರು ಹರಸಾಹಸ ಪಟ್ಟರು.

ತಡರಾತ್ರಿ 3 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕಿಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಲಕ್ಷಾಂತರ ಮೌಲ್ಯದ ಮರದ ದಿಮ್ಮಿಗಳು ಅಗ್ನಿಗೆ ಆಹುತಿಯಾಗಿದೆ.

Edited By : Manjunath H D
Kshetra Samachara

Kshetra Samachara

03/01/2022 12:20 pm

Cinque Terre

12.61 K

Cinque Terre

0