ವಿಟ್ಲ: ಸ್ವಿಫ್ಟ್ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ಇನೋವಾ ಕಾರಿಗೆ ಹಾಗೂ ಅಲ್ಲಿಯೇ ನಿಲ್ಲಿಸಿದ್ದ ಬೈಕ್ ಗಳಿಗೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪುತ್ತೂರು ರಸ್ತೆಯ ಅಳಕೆಮಜಲಿನಲ್ಲಿ ನಡೆದಿದೆ.
ವಿಟ್ಲ ಕಡೆಯಿಂದ ಪುತ್ತೂರು ಕಡೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಮುಂದೆ ಇನೋವಾ ಹಾಗೂ ಬೈಕ್ ಗಳಿಗೆ ಡಿಕ್ಕಿ ಹೊಡೆದಿದೆ. ಇನ್ನು ಈ ಅಪಘಾತದಿಂದಾಗಿ ಸ್ವಿಫ್ಟ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಗಾಯಗಳಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಸ್ವಿಫ್ಟ್ ಮತ್ತು ಇನ್ನೋವಾ ಕಾರ್ ಮುಖಾಮುಖಿಯಿಂದಾಗಿ ಕಾರಿನ ಮುಂಭಾಗ ಜಖಂಗೊಂಡಿದೆ. ಅಪಘಾತದ ತೀವ್ರತೆಗೆ ಸ್ವಿಫ್ಟ್ ಕಾರ್ ನ ಏರ್ ಬ್ಯಾಗ್ ಓಪನ್ ಆಗಿದ್ದು,ಆಕ್ಟಿವಾ, ಬೈಕ್ ಜಖಂಗೊಂಡಿದೆ ಎಂದು ತಿಳಿದು ಬಂದಿದೆ.
Kshetra Samachara
08/01/2022 07:25 pm