ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮಾಯಾ ಇಂಟರ್ ನ್ಯಾಷನಲ್ ಹೊಟೇಲ್ ಕಟ್ಟಡದಲ್ಲಿ ಬೆಂಕಿ ಅವಘಡ

ಮಂಗಳೂರು: ನಗರದ ಬೆಂದೂರ್ ವೆಲ್ ನಲ್ಲಿರುವ ಮಾಯಾ ಇಂಟರ್ ನ್ಯಾಷನಲ್ ಹೋಟೆಲ್ ಕಟ್ಟಡದಲ್ಲಿ ಇಂದು ಬೆಳ್ಳಂಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ.

ಅದೇ ಕಟ್ಟಡದಲ್ಲಿರುವ ಎಲ್ ಜಿ ಶೋರೂಂನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಆ ಬೆಂಕಿ ಇತರೆಡೆ ಆವರಿಸಿ ಮಾಯಾ ಇಂಟರ್ ನ್ಯಾಷನಲ್ ಹೊಟೇಲ್ ನಲ್ಲಿಯೂ ಕಾಣಿಸಿಕೊಂಡಿದೆ. ಪರಿಣಾಮ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದೆ. ಇದೀಗ ಕಟ್ಟಡದ ಎಲ್ಲ ಮಳಿಗೆಗಳಿಗೂ ಬೆಂಕಿ ಹಬ್ಬಿರುವ ಶಂಕೆಯಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ.

Edited By : Shivu K
Kshetra Samachara

Kshetra Samachara

10/01/2022 09:34 am

Cinque Terre

14.08 K

Cinque Terre

0