ಮಂಗಳೂರು: ಸೀಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯಾ ಸೋರಿಕೆಯಾಗಿ 20 ಮಂದಿ ಕಾರ್ಮಿಕರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ.
ಅಮೋನಿಯಾ ಸೋರಿಕೆಯಾಗಿರುವ ಎವರೆಸ್ಟ್ ಸೀಫುಡ್ ಫ್ಯಾಕ್ಟರಿಯಲ್ಲಿ ಒಟ್ಟು 80 ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅವರಲ್ಲಿ 20 ಮಂದಿಗೆ ಉಸಿರಾಟದ ತೊಂದರೆ ಯಾಗಿದ್ದು, ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಪರಿಸ್ಥಿತಿಯನ್ನು ತಹಬದಿಗೆ ತಂದಿದ್ದು, ಪಣಂಬೂರು ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
11/01/2022 01:58 pm