ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಅಡಿಕೆ ಸಾಗಾಟದ ಟೆಂಪೋ ಪಲ್ಟಿ: ಚಾಲಕ ,ನಿರ್ವಾಹಕ ಅಪಾಯದಿಂದ ಪಾರು

ಪಡುಬಿದ್ರೆ: ಅಡಿಕೆ ಸಾಗಾಟದ ಟೆಂಪೋವೊಂದರ ಟಯರ್ ಸಿಡಿದ ಪರಿಣಾಮ ಉರುಳಿ ಬಿದ್ದ ಘಟನೆ ಉಡುಪಿಯ ಕಾಪುವಿನಲ್ಲಿ ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಿಂದ ಮಂಗಳೂರಿಗೆ ಅಡಿಕೆ ಸಾಗಾಟ ಮಾಡುತ್ತಿದ್ದ ಟೆಂಪೋ, ಕಾಪು ರಾಷ್ಟ್ರೀಯ ಹೆದ್ದಾರಿ 66ರ ಫ್ಲೈಓವರ್ ತಲುಪುತ್ತಿದ್ದಂತೆ ಟಯರ್ ಸಿಡಿದಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ, ಟೆಂಪೋ ಪಲ್ಟಿಯಾಗಿ ರಸ್ತೆಗೆ ಅಡ್ಡವಾಗಿ ಬಿದ್ದಿದೆ. ಅಪಘಾತದಿಂದಾಗಿ ಟೆಂಪೋದಲ್ಲಿದ್ದ ಚಾಲಕ ಹಾಗೂ ನಿರ್ವಾಹಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Edited By : Shivu K
Kshetra Samachara

Kshetra Samachara

12/01/2022 12:46 pm

Cinque Terre

11.21 K

Cinque Terre

0