ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿನ್ನಿಗೋಳಿ: ಸ್ಕೂಟರ್ ಗೆ ಟಿಪ್ಪರ್ ಡಿಕ್ಕಿ ಮಹಿಳೆಗೆ ಗಂಭೀರ ಗಾಯ

ಮುಲ್ಕಿ: ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಪದ್ಮನೂರು ಹೆದ್ದಾರಿ ತಿರುವು ಬಳಿ ಟಿಪ್ಪರ್ ಡಿಕ್ಕಿ ಸ್ಕೂಟರ್ ಸವಾರ ಹಾಗೂ ಸಹಸವಾರಣಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗಾಯಾಳುಗಳನ್ನು ಕೆರೆಕಾಡು ನಿವಾಸಿಗಳಾದ ಅವಿನಾಶ್ ಮತ್ತು ಶಾಂತಿ ಎಂದು ಗುರುತಿಸಲಾಗಿದೆ.

ಕಿನ್ನಿಗೋಳಿಯಿಂದ ಕೆಲಸ ಮುಗಿಸಿ ಸ್ಕೂಟರಿನಲ್ಲಿ ಬರುತ್ತಿದ್ದ ಅವಿನಾಶ್ ರವರಿಗೆ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಪದ್ಮನೂರು ಬಳಿ ಏಕಾಏಕಿ ಟಿಪ್ಪರ್ ಚಾಲಕನ ನಿರ್ಲಕ್ಷ್ಯ ಚಾಲನೆಯಿಂದ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಸ್ಕೂಟರ್ ಸವಾರ ಹಾಗೂ ಸಹ ಸವಾರಣಿಗೆ ಗಂಭೀರ ಗಾಯಗಳಾಗಿದ್ದು ಹೆದ್ದಾರಿಯಲ್ಲಿ ಬಿದ್ದು ಒದ್ದಾಡುತ್ತಿರುವಾಗ ಸಾಮಾಜಿಕ ಕಾರ್ಯಕರ್ತ ನಿರಂಜನ್ ಬಂಗೇರ ಹರಿಪಾದೆ ಹಾಗೂ ಮುಲ್ಕಿ ಆಟೋ ಚಾಲಕ ಮತ್ತಿತರರು ಸೇರಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದ್ದಾರೆ.

ಸುರತ್ಕಲ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Edited By :
Kshetra Samachara

Kshetra Samachara

17/01/2022 09:39 pm

Cinque Terre

18.53 K

Cinque Terre

1

ಸಂಬಂಧಿತ ಸುದ್ದಿ