ಅಮಾಸೆಬೈಲು: ಶಂಕರನಾರಾಯಣದಿಂದ ಹೊನ್ನಾಳಿಗೆ ತೆರಳುತ್ತಿದ್ದ ಕಾರೊಂದು ಹುಲಿಕಲ್ ಘಾಟ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಘಟನೆ ಸಂಭವಿಸಿದೆ.
ಕಾರಿನಲ್ಲಿ ಚಾಲಕ ಸೇರಿದಂತೆ ಐದು ಮಂದಿ ಪ್ರಯಾಣಿಕರಿದ್ದು ಅದೃಷ್ಟವಶಾತ್ ಎಲ್ಲರೂ ಸುರಕ್ಷಿತವಾಗಿದ್ದಾರೆ.ಕಾರಿಗೆ ಬೆಂಕಿ ಹೊತ್ತಿಕೊಂಡ ತಕ್ಷಣ ವಿಷಯ ತಿಳಿದ ಹೊಸನಗರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದರು. ಅಷ್ಟರಲ್ಲಾಗಲೇ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿತ್ತು.ಈ ದುರ್ಘಟನೆ ಉಡುಪಿ ಜಿಲ್ಲೆಯ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Kshetra Samachara
19/01/2022 05:47 pm