ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಲಾರಿ ಡಿಕ್ಕಿ ಬೈಕ್ ಸವಾರ ಪವಾಡಸದೃಶ ಪಾರು

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ಸುನಿಲ್ದಾಣ ಜಂಕ್ಷನ್ ಬಳಿ ಲಾರಿಯೊಂದು ಬೈಕಿಗೆ ಡಿಕ್ಕಿಯಾಗಿದ್ದು ಬೈಕ್ ಸವಾರ ಪವಾಡಸದೃಶ ಪಾರಾಗಿದ್ದಾರೆ.

ಮಂಗಳೂರಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಲಾರಿ ಮುಲ್ಕಿ ಬಸ್ ನಿಲ್ದಾಣದ ಬಳಿಯ ಜಂಕ್ಷನ್ ತಲುಪುತ್ತಿದ್ದಂತೆ ಮುಂದುಗಡೆ ಹೋಗುತ್ತಿದ್ದ ಬೈಕಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭ ಬೈಕ್ ಸವಾರ ಹಾಗೂ ಸಹಸವಾರ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ.

ಅಪಘಾತದಿಂದ ಬೈಕ್ ಜಖಂಗೊಂಡಿದ್ದು ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬಳಿಕ ರಾಜಿ ಸಂಧಾನದ ಮೂಲಕ ಪ್ರಕರಣ ಅಂತ್ಯಗೊಂಡಿದೆ.

ರಾಷ್ಟ್ರೀಯ ಹೆದ್ದಾರಿ 66 ಮೂಲ್ಕಿ ಬಸ್ ನಿಲ್ದಾಣ , ಬಿಲ್ಲವ ಸಂಘ ಹಾಗೂ ಬಪ್ಪನಾಡು ಜಂಕ್ಷನ್ ಬಳಿ ಅರ್ಧಂಬರ್ಧ ಕಾಮಗಾರಿಯಿಂದ ಈಗಾಗಲೇ ಅನೇಕ ಅಪಘಾತಗಳು ಸಂಭವಿಸಿದ್ದು ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ . ಕೂಡಲೇ ಹೆದ್ದಾರಿ ಚತುಷ್ಪಥ ಸರ್ವಿಸ್ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಆಟೋಚಾಲಕ ಮೋಹನ್ ಕುಬೆವೂರು ಒತ್ತಾಯಿಸಿದ್ದಾರೆ .

Edited By :
Kshetra Samachara

Kshetra Samachara

19/01/2022 08:22 pm

Cinque Terre

15.95 K

Cinque Terre

0

ಸಂಬಂಧಿತ ಸುದ್ದಿ