ಕಾಪು: ಬೈಕ್‌ಗೆ ಲಾರಿ ಡಿಕ್ಕಿಯಾಗಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾಪು ಠಾಣೆ ವ್ಯಾಪ್ತಿಯ ಮೂಳೂರು ಸಿಎಸ್ಐ ಸ್ಕೂಲ್ ಮುಂಭಾಗದಲ್ಲಿಇಂದು ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳೂರು ಕಡೆಯಿಂದ ಉಡುಪಿಯತ್ತ ಸಾಗುತ್ತಿದ್ದ ಲಾರಿಯು ಉಡುಪಿ ಕಡೆಯಿಂದ ಬರುತ್ತಿದ್ದ ಪಲ್ಸರ್ ಬೈಕ್ ಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಸವಾರನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಕಾಪು ಪೊಲೀಸರು ಸ್ಥಳಕ್ಕೆ ಧಾವಿಸಿ, ತನಿಖೆ ನಡೆಸುತ್ತಿದ್ದಾರೆ.
Kshetra Samachara
23/01/2022 07:12 pm