ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರಹ್ಮಾವರ: ಸ್ನಾನಕ್ಕೆ ಹೋದ ವ್ಯಕ್ತಿ ಕಾಲು ಜಾರಿ ಕೆರೆಗೆ ಬಿದ್ದು ಸಾವು

ಪೇತ್ರಿ: ಬ್ರಹ್ಮಾವರ ಠಾಣೆ ವ್ಯಾಪ್ತಿಯ ಪೇತ್ರಿಯಲ್ಲಿ ಕೆರೆಯೊಂದಕ್ಕೆ ಸ್ನಾನಕ್ಕೆಂದು ಹೋದ ವ್ಯಕ್ತಿ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. 55 ವರ್ಷದ ಪಾಂಡು ನಾಯ್ಕ್ ನೀರಿಗೆ ಬಿದ್ದು ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಮಧ್ಯಾಹ್ನ 1 ಗಂಟೆ ಸುಮಾರಿಗೆ ಇವರು ನೀರಿಗೆ ಬಿದ್ದಿದ್ದು ಕೆರೆಯಲ್ಲಿ ಹೂಳು ತುಂಬಿದ್ದರಿಂದ ಮೇಲಕ್ಕೆತ್ತಲು ಹರಸಾಹಸ ಪಡಬೇಕಾಯಿತು. ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಮೇಲಕ್ಕೆತ್ತಲು ವಿಫಲರಾಗಿ ಕೊನೆಗೆ ಆಪದ್ಬಾಂಧವ ಈಶ್ವರ್ ಮಲ್ಪೆ ಅವರಿಗೆ ಕರೆ ಮಾಡಲಾಯಿತು. ಈಶ್ವರ್ ಮಲ್ಪೆ ಅವರು ಕಾರ್ಯಾಚರಣೆ ಮಾಡಿ ಶವವನ್ನು ಮೇಲಕ್ಕೆತ್ತುವಲ್ಲಿ ಸಫಲರಾದರು.

ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagesh Gaonkar
Kshetra Samachara

Kshetra Samachara

24/01/2022 08:47 pm

Cinque Terre

7.91 K

Cinque Terre

0

ಸಂಬಂಧಿತ ಸುದ್ದಿ