ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ ಸಂಗಮ್ ಸರ್ಕಲ್ ಬಳಿ ಅಪಘಾತ: ಇಬ್ಬರಿಗೆ ಗಂಭೀರ ಗಾಯ!

ಕುಂದಾಪುರ: ರಸ್ತೆ ಕ್ರಾಸ್ ಮಾಡುತ್ತಿದ್ದ ಬೈಕ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ಸಂಗಮ್ ಸರ್ಕಲ್ ಬಳಿ ನಡೆದಿದೆ.

ಗಾಯಗೊಂಡ ಬೈಕ್ ಸವಾರರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರದವರು ಎಂದು ಗುರುತಿಸಲಾಗಿದೆ. ಎರಡು ಬೈಕ್ ಗಳಲ್ಲಿ ನಾಲ್ಕು ಮಂದಿ ಯುವಕರು ಹೊಸನಗರದಿಂದ ಕುಂದಾಪುರಕ್ಕೆ ಬಂದಿದ್ದರು.

ರಾಷ್ಟ್ರೀಯ ಹೆದ್ದಾರಿ 66ರ ಸಂಗಮ್ ಸರ್ಕಲ್ ಬಳಿ ಅಂಗಡಿಯೊಂದರಲ್ಲಿ ಕೋಡಿ ಬೀಚ್ ಹೋಗುವ ದಾರಿ ಕೇಳಿಕೊಂಡು, ರಸ್ತೆ ಕ್ರಾಸ್ ಮಾಡುತ್ತಿದ್ದರು. ಈ ವೇಳೆ ಬೈಂದೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರು ತುಂಬ ದೂರ ಎಸೆಯಲ್ಪಟ್ಟಿದ್ದಾರೆ.

ಇಬ್ಬರು ಸವಾರರಿಗೂ ಗಂಭೀರ ಸ್ವರೂಪದ ಗಾಯವಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಕಾರು ಚಾಲಕನ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.

Edited By :
Kshetra Samachara

Kshetra Samachara

25/01/2022 04:48 pm

Cinque Terre

5.29 K

Cinque Terre

2

ಸಂಬಂಧಿತ ಸುದ್ದಿ