ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೈಕಂಬ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬಾಲಕಿ ಸಾವು

ಬಜಪೆ: ಕೈಕಂಬ ಸಮೀಪದ ಕಾಜಿಲ ಎಂಬಲ್ಲಿ ಸೋಮವಾರದಂದು ಟಿಪ್ಪರ್ ಮತ್ತು ರಿಕ್ಷಾ ಮುಖಾಮುಖಿ ಯಾಗಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕರಿಯಂಗಳ ಗ್ರಾಮದ ಪಲ್ಲಿಪಾಡಿ ನಿವಾಸಿ ಅಸ್ ನಾ(16) ಚಿಕಿತ್ಸೆಗೆ ಸ್ಪಂದಿಸದೆ ನಿನ್ನೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಬಾಲಕಿಯ ತಾಯಿ ಹಾಗೂ ರಿಕ್ಷಾ ಚಾಲಕರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಯುತ್ತಿದೆ.ಘಟನೆಯಲ್ಲಿ ಗಾಯಗೊಂಡವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸುವಲ್ಲಿ ಸ್ಥಳೀಯ ಯುವಕರು ಸಹಕರಿಸಿದ್ದರು.ಆದರೆ ದುರದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಬಾಲಕಿ ಅಸ್ ನಾ ನಿನ್ನೆ ಬೆಳಿಗ್ಗೆ ಸಾವನ್ನಪ್ಪಿದ್ದಾಳೆ.

ಬಾಲಕಿ ತನ್ನ ತಾಯಿಯೊಂದಿಗೆ ಮದುವೆ ಕಾರ್ಯಕ್ರಮಕ್ಕೆ ರಿಕ್ಷಾದಲ್ಲಿ ಕೈಕಂಬದತ್ತ ತೆರಳುತ್ತಿದ್ದ ಸಂದರ್ಭದಲ್ಲಿ ಪೊಳಲಿ ದ್ವಾರದಿಂದ ಅಡ್ಡೂರಿನತ್ತ ಅತೀ ವೇಗ ಮತ್ತು ಅಜಾಗರೂಕತೆಯಿಂದ ವಿರುದ್ದ ದಿಕ್ಕಿನಲ್ಲಿ ಬಂದ ಟಿಪ್ಪರ್ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ.ಘಟನೆಯಲ್ಲಿ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು ರಸ್ತೆಯಂಚಿಗೆ ಎಸೆಯಲ್ಪಟ್ಟಿದೆ.

ಘಟನೆಯ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Edited By : Nagaraj Tulugeri
Kshetra Samachara

Kshetra Samachara

26/01/2022 06:14 pm

Cinque Terre

6.51 K

Cinque Terre

1