ಮುಲ್ಕಿ: ಕಿನ್ನಿಗೋಳಿ-ಕಟೀಲು ರಾಜ್ಯ ಹೆದ್ದಾರಿಯ ಮೂರುಕಾವೇರಿ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಾರ್ಗಸೂಚಿ ಫಲಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು ಕಾರಿನಲ್ಲಿದ್ದವರು ಪವಾಡಸದೃಶ ಪಾರಾಗಿದ್ದಾರೆ.
ಮೂರು ಕಾವೇರಿಯಿಂದ ಕಟೀಲು ಕಡೆಗೆ ನೂತನ ಮಾರುತಿ ಎರ್ಟಿಗಾ ಕಾರಿನಲ್ಲಿ ತೆರಳುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ.
ಅಪಘಾತದ ರಭಸಕ್ಕೆ ಮಾರ್ಗಸೂಚಿ ಫಲಕಕ್ಕೆ ಹಾನಿಯಾಗಿದ್ದು ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದವರು ಪವಾಡಸದೃಶ ಪಾರಾಗಿದ್ದಾರೆ.
ಕಾರಿನಲ್ಲಿದ್ದವರು ಮಂಗಳೂರು ಮೂಲದವರು ಎಂದು ತಿಳಿದುಬಂದಿದ್ದು ನೂತನ ಕಾರಿಗೆ ಪೂಜೆ ಸಲ್ಲಿಸಲು ಕಟೀಲು ದೇವಸ್ಥಾನಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
Kshetra Samachara
28/01/2022 04:14 pm