ಬೈಂದೂರು: ರಸ್ತೆಗೆ ಅಡ್ಡ ಬಂದ ದನವನ್ನು ತಪ್ಪಿಸುವ ಭರದಲ್ಲಿ ಬೈಕೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಕಂಬದಕೋಣೆ ವಿಜಯ ಬ್ಯಾಂಕ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.
ಮೃತರನ್ನು ನಾವುಂದದ ನಾಗರಾಜ ಖಾರ್ವಿ ಎಂದು ಗುರುತಿಸಲಾಗಿದೆ. ಉಪ್ಪುಂದ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಬೈಕಿಗೆ ದನವೊಂದು ಅಡ್ಡ ಬಂತು. ಅದನ್ನು ತಪ್ಪಿಸುವ ಭರದಲ್ಲಿ ನಾಗರಾಜ ಬೈಕನ್ನು ಎಡಕ್ಕೆ ಚಲಾಯಿಸಿದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಡಿವೈಡರ್ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡ ನಾಗರಾಜ್, ಬೈಂದೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
29/01/2022 01:37 pm