ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಲಾರಿ ಡಿಕ್ಕಿಯಾಗಿ ನಡು ರಸ್ತೆಯಲ್ಲೇ ಹೊತ್ತಿ ಉರಿದ ಸ್ಕೂಟರ್

ಮಣಿಪಾಲ: ಲಾರಿ ಡಿಕ್ಕಿ ಹೊಡೆದ ಪರಿಣಾಮ ನಡು ರಸ್ತೆಯಲ್ಲೇ ಸ್ಕೂಟರ್‌ವೊಂದು ಹೊತ್ತಿ ಉರಿದ ಘಟನೆ ಮಣಿಪಾಲದಲ್ಲಿ ನಡೆದಿದೆ.

ಉಡುಪಿಯಿಂದ ಮಣಿಪಾಲ ಡಿಸಿ ಆಫೀಸ್ ಕಡೆಗೆ ಹೋಗುತ್ತಿದ್ದ ಲಾರಿಯೊಂದು ಸುಜುಕಿ ಆಕ್ಸಿಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಗೆ ಬಿದ್ದ ಸ್ಕೂಟರ್‌ನ ಪೆಟ್ರೋಲ್ ಟ್ಯಾಂಕ್‌ಗೆ ಹಾನಿಯಾಗಿದೆ. ಪರಿಣಾಮ ಕ್ಷಣಾರ್ಧದಲ್ಲಿ ಬೆಂಕಿ ಆವರಿಸುವುದರೊಂದಿಗೆ ಸ್ಕೂಟರ್ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವೇಳೆ ಘಟನಾ ಸ್ಥಳದಲ್ಲಿನ ಮ್ಯಾಕ್ಸ್ ಬಟ್ಟೆ ಮಳಿಗೆಯ ಸಿಬ್ಬಂದಿ ಬೆಂಕಿ ನಂದಿಸುವ ಸಾಧನ ತಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Edited By : Nagesh Gaonkar
PublicNext

PublicNext

01/02/2022 06:36 pm

Cinque Terre

48.73 K

Cinque Terre

1

ಸಂಬಂಧಿತ ಸುದ್ದಿ