ಮಲ್ಪೆ: ನಿಯಂತ್ರಣ ತಪ್ಪಿದ ಬೈಕೊಂದು ಕಂಪೌಂಡ್ ಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಡೆಕಾರಿನಲ್ಲಿ ನಡೆದಿದೆ.
ಉದ್ಯಾವರ ಎಸ್‌ಡಿಎಂ ಆಯುರ್ವೇದ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿ, ಬೀದರ್ ಜಿಲ್ಲೆಯ ಋಷಿಕೇಶ್ (23) ಮೃತ ವಿದ್ಯಾರ್ಥಿಯಾಗಿದ್ದಾನೆ. ಎಸ್‌ಡಿಎಂ ಆಯುರ್ವೇದ ಮಹಾವಿದ್ಯಾಲಯದಲ್ಲಿ ಅಂತಿಮ ಬಿಎಎಂಎಸ್ ವಿದ್ಯಾರ್ಥಿಯಾಗಿದ್ದ ಇವರು, ಕುತ್ಪಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಬುಧವಾರ ಮಧ್ಯರಾತ್ರಿ ಮಲ್ಪೆ ಬೀಚ್‌ಗೆ ತನ್ನ ಬೈಕಿನಲ್ಲಿ ಒಬ್ಬರೇ ಹೊರಟಿದ್ದರೆನ್ನಲಾಗಿದೆ.
ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂಪೌಂಡ್ ಗೋಡೆಗೆ ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಋಷಿಕೇಶ್ ಸ್ಥಳದಲ್ಲಿಯೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
03/02/2022 05:54 pm