ಉಡುಪಿ: ವೇಗವಾಗಿ ಚಲಿಸುತ್ತಿದ್ದ ಇನ್ನೋವಾ ಕಾರೊಂದು, ಗರ್ಭಿಣಿ ಸಹಿತ ಮೂವರಿಗೆ ಢಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಗಂಭೀರ ಗಾಯಗೊಂಡ ಘಟನೆ ಉಡುಪಿಯ ಕಡಿಯಾಳಿಯಲ್ಲಿ ನಡೆದಿದೆ. ಘಟನೆಯ ತೀವ್ರತೆ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ.
ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ಕಡೆಗೆ ಮೂವರು ರಸ್ತೆ ದಾಟುತ್ತಿದ್ದಾಗ, ಮಣಿಪಾಲದಿಂದ ಉಡುಪಿ ಕಡೆಗೆ ವೇಗವಾಗಿ ಬರುತ್ತಿದ್ದ ಇನ್ನೋವಾ ಕಾರು ಚಾಲಕನ ಅಜಾಗರೂಕತೆಯಿಂದ ಮೂವರಿಗೂ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಮೂವರು ರಸ್ತೆಗೆ ಬಿದ್ದಿದ್ದು, ಗರ್ಭಿಣಿ ಮಹಿಳೆಯ ತಲೆಗೆ ತೀವ್ರತರದ ಗಾಯಗಳಾಗಿವೆ. ಅಪಘಾತದ ದೃಶ್ಯಾವಳಿ ಪಕ್ಕದ ಶೋರೂಮ್ ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಾಲಕನ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
PublicNext
04/02/2022 04:53 pm