ಮಂಗಳೂರು: ನಗರ ಹೊರವಲಯದ ಸುರತ್ಕಲ್ ಸಮೀಪದ ಮುಕ್ಕ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮೀನಿನ ಲಾರಿಯೊಂದು ಪಲ್ಟಿಯಾಗಿದೆ.
ಲಾರಿ ಪಲ್ಟಿಯಾದ ರಭಸಕ್ಕೆ ರಸ್ತೆಯಿಡೀ ಮೀನು ಚೆಲ್ಲಾ ಪಿಲ್ಲಿಯಾಗಿ ಬಿದ್ದಿದೆ. ಅಪಘಾತದಲ್ಲಿ ಲಾರಿ ಚಾಲಕ ಗಂಭೀರ ಗಾಯಗೊಂಡಿದ್ದಾನೆ.
ಈ ಲಾರಿಯು ಉಡುಪಿ ಕಡೆಯಿಂದ ಉಳ್ಳಾಲದ ಕಡೆಗೆ ಹೋಗ್ತಿತ್ತು. ಲಾರಿ ಪಲ್ಟಿಯಾದ ಪರಿಣಾಮ ಹೆದ್ದಾರಿ ಸಂಚಾರ ಕೆಲಹೊತ್ತು ಅಸ್ತವ್ಯಸ್ತಗೊಂಡಿತು.
Kshetra Samachara
13/02/2022 09:34 pm