ಮಂಗಳೂರು: ಕರ್ತವ್ಯ ಮುಗಿಸಿ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದ ಅರೆವೈದ್ಯಕೀಯ ವಿದ್ಯಾರ್ಥಿ ಮೃತಪಟ್ಟ ಘಟನೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಉಪ್ಪಿನಂಗಡಿ ನಿವಾಸಿ ಬಿ.ಎಸ್. ನಾಗೇಶ್(23) ಮೃತ ವಿದ್ಯಾರ್ಥಿ.
ಬಿ.ಎಸ್.ನಾಗೇಶ್ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ(ಪ್ಯಾರಾ ಮೆಡಿಕಲ್ ಇಂಟರ್ನ್) ಯಾಗಿದ್ದರು. ಎಂದಿನಂತೆ ಆಸ್ಪತ್ರೆಯಲ್ಲಿ ಕರ್ತವ್ಯ ಮುಗಿಸಿ ವಿಶ್ರಾಂತಿ ಕೊಠಡಿಗೆ ತೆರಳಿದ್ದರು. ಅವರು ಮಲಗಿದ್ದಲ್ಲಿಯೇ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
Kshetra Samachara
14/02/2022 08:11 pm