ಬಂಟ್ವಾಳ: ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ತುಂಬೆ ಬಿ.ಎ. ಕಾಲೇಜು ಬಳಿಕ ರಾಷ್ಟ್ರೀಯ ಹೆದ್ದಾರಿಯ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸೀ ಬರ್ಡ್ ಹೆಸರಿನ ಖಾಸಗಿ ಬಸ್ ತುಂಬೆ ಬಿ.ಎ. ಕಾಲೇಜು ಬಳಿಯ ತಿರುವಿನಲ್ಲಿ ಪಲ್ಟಿಯಾಗಿದೆ. ಬಸ್‌ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಕೆಲವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್‌ನ ಟ್ಯಾಂಕ್‌ನಿಂದ ಡೀಸೆಲ್ ಸೋರಿಕೆಯಾಗಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ನೀರು ಹಾಯಿಸಿ ಮುಂಜಾಗ್ರತಾ ಕ್ರಮ ವಹಿಸಿದ್ದಾರೆ.
Kshetra Samachara
15/02/2022 08:53 am