ಬೆಳ್ಳಾರೆ: ಪುತ್ತೂರು ಸಮೀಪದ ಬೆಳ್ಳಾರೆ ಪಂಜಿಗಾರು ಎಂಬಲ್ಲಿ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ್ದಾರೆ. ಮೃತ ಚಾಲಕನನ್ನು ತಮಿಳುನಾಡು ಮೂಲದ ಶಿವಕುಮಾರ್ (40) ಎಂದು ಗುರುತಿಸಲಾಗಿದೆ
ಬೆಳ್ಳಾರೆಯಿಂದ ನಿಂತಿಕಲ್ಲು ಕಡೆಗೆ ರಬ್ಬರ್ ಶೀಟ್ ಲೋಡ್ ಮಾಡಿಕೊಂಡು ಹೋಗುತ್ತಿದ್ದಾಗ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಪಂಜಿಗಾರು ಎಂಬಲ್ಲಿ ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಚಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅಪಘಾತದ ರಭಸಕ್ಕೆ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿಯಲ್ಲಿದ್ದ ರಬ್ಬರ್ಶೀಟ್ಗಳು ಚೆಲ್ಲಾಪಿಲ್ಲಿಯಾಗಿ ಕೆಲ ಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಬಳಿಕ ಕ್ರೇನ್ ಮೂಲಕ ಲಾರಿಯನ್ನು ಮೇಲಕ್ಕೆತ್ತಲಾಯಿತು.
ಸ್ಥಳಕ್ಕೆ ಬೆಳ್ಳಾರೆ ಠಾಣಾ ಎಸ್.ಐ. ಆಂಜನೇಯ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆದಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
16/02/2022 10:49 am