ಕೋಟ: ಕಾರು ಡಿಕ್ಕಿಯಾಗಿ ನಿವೃತ್ತ ಪೋಸ್ಟ್ ಮಾಸ್ಟರ್ ಮೃತಪಟ್ಟ ಘಟನೆ ಸಾಲಿಗ್ರಾಮ ಬಸ್ ನಿಲ್ದಾಣದ ಬಳಿ ನಿನ್ನೆ ಸಂಭವಿಸಿದೆ.
ಕಾರ್ಕಡ ನಿವಾಸಿ, ನಿವೃತ್ತ ಪೋಸ್ಟ್ ಮಾಸ್ಟರ್ ವಾಸುದೇವ ಐತಾಳ (76) ಮೃತ ವ್ಯಕ್ತಿ.ಇವರು ಸಾಲಿಗ್ರಾಮದಿಂದ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ ಸಂದರ್ಭ ಉಡುಪಿ ಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡರು.
ಕೂಡಲೇ ಅವರನ್ನು ಸ್ಥಳೀಯರು ಆ್ಯಂಬುಲೆನ್ಸ್‌ನಲ್ಲಿ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದು, ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಮೃತರು ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ. ಅವರು ಸಾಸ್ತಾನ, ಬನ್ನಂಜೆಯಲ್ಲಿ ಪೋಸ್ಟ್ ಮಾಸ್ಟರ್ ಆಗಿ ಸೇವೆ ಸಲ್ಲಿಸಿದ್ದರು.
Kshetra Samachara
16/02/2022 06:07 pm