ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಳ್ಳಾಲ ಉರೂಸ್ ನಲ್ಲಿ ಅವಘಡ : ಜಾಯಿಂಟ್ ವ್ಹೀಲ್ ತುಂಡಾಗಿ ಹಲವರಿಗೆ ಗಾಯ

ಮಂಗಳೂರು: ಮಂಗಳೂರು ನಗರದ ಉಳ್ಳಾಲದಲ್ಲಿ ನಡೆಯುತ್ತಿರುವ ಪಂಚವಾರ್ಷಿಕ ಉರೂಸ್ ಕಾರ್ಯಕ್ರಮದಲ್ಲಿ ಜಾಯಿಂಟ್ ವ್ಹೀಲ್ ತುಂಡಾಗಿ ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ಫೆ.22 ರ ರಾತ್ರಿ ನಡೆದಿದೆ.

ಉರೂಸ್ ಪ್ರಯುಕ್ತ ದರ್ಗಾ ಸಂದರ್ಶನಕ್ಕೆಂದು ಬಂದಿದ್ದ ಕೇರಳ ಮೂಲದ ಕುಟುಂಬದ ನಾಲ್ವರು ಸಂತೆಯಲ್ಲಿದ್ದ ಜಾಯಿಂಟ್ ವ್ಹೀಲ್ ನಲ್ಲಿ ಆಟವಾಡುತ್ತಿರುವಾಗ ಏಕಾಏಕಿ ವ್ಹೀಲ್ ಜಾಯಿಂಟ್ ತಪ್ಪಿದ ಪರಿಣಾಮ ನಾಲ್ವರು ಮಕ್ಕಳು ಕೆಳಕ್ಕೆ ಬಿದ್ದು ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಉಮ್ಮರ್ ಫಾರೂಕ್ (42), ಮೊಹಮ್ಮದ್ ಆಯೂಬ್ (7) ಮಶಿಥಾ (18) ನೂರ್ ಜಹಾನ್ (36) ಸಲೇಕಾ (28) ಮತ್ತು ಸಮೀರ್( 41) ಎಂದು ಗುರುತ್ತಿಸಲಾಗಿದೆ.

ಘಟನೆಯಿಂದಾಗಿ ಕೆಲಕಾಲ ಸ್ಥಳದಲ್ಲಿ ಜನ ಜಮಾಯಿಸಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

23/02/2022 08:13 am

Cinque Terre

10.96 K

Cinque Terre

1

ಸಂಬಂಧಿತ ಸುದ್ದಿ