ಉಡುಪಿ: ನಗರದ ಕರಾವಳಿ ಬೈಪಾಸ್ ಬಳಿ ಇಂದು ಸರಣಿ ಅಪಘಾತ ಸಂಭವಿಸಿದ್ದು, ವಾಹನಗಳಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯಗಳಿಲ್ಲದೆ ಪಾರಾದ ಘಟನೆ ನಡೆದಿದೆ.
ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರೊಂದು ಲಾರಿಯೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಈ ಅಪಘಾತ ಸಂಭವಿಸಿದೆ. ಟೈಲ್ಸ್ ಸಾಗಿಸುತ್ತಿದ್ದ ಲಾರಿಯನ್ನು ಅದರ ಚಾಲಕ ಏಕಾಏಕಿ ನಿಧಾನಗೊಳಿಸಿದ್ದಾನೆ. ಈ ವೇಳೆ ಲಾರಿಗೆ ಡಿಕ್ಕಿ ಹೊಡೆಯುವುದರಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ ಎಂದು ತಿಳಿದುಬಂದಿದೆ.
ಕಾರು ರಸ್ತೆಯ ಮಧ್ಯಭಾಗಕ್ಕೆ ಬಂದ ಪರಿಣಾಮ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಇದೇ ಸಂದರ್ಭ ಕುಂದಾಪುರ ಕಡೆಗೆ ಸಾಗುತ್ತಿದ್ದ ಇನ್ನೊಂದು ಕಾರು ಮೊದಲ ಕಾರಿಗೆ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೂ ಸಾವು ನೋವಾಗಿಲ್ಲ. ಕೆಲಕಾಲ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯ ಉಂಟಾಯಿತು.
Kshetra Samachara
03/03/2022 06:53 pm