ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು : ಟಿಪ್ಪರ್ ಬೈಕ್ ಗೆ ಡಿಕ್ಕಿ ಬೈಕ್ ಸವಾರ ಸಾವು

ಕಾಪು : ಇನ್ನಂಜೆ‌ - ಕಲ್ಲುಗುಡ್ಡೆ ರಸ್ತೆಯಲ್ಲಿ ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ‌ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ಬೈಕ್ ಸವಾರ ಕಾಪು ಕೋತಲಕಟ್ಟೆ ದಂಡತೀರ್ಥ ನಿವಾಸಿ ಸುನೀಲ್ ಕುಮಾರ್ (32) ಮೃತ‌ ಪಟ್ಟಿರುವುದಾಗಿ ತಿಳಿದು ಬಂದಿದೆ.

ಇನ್ನಂಜೆ‌ - ಕಲ್ಲುಗುಡ್ಡೆ - ಬಂಟಕಲ್‌ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಟಿಪ್ಪರ್ ನ ಹಿಂಬದಿಯ ಚಕ್ರದಡಿಗೆ ಸಿಲುಕಿದ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ತಲೆಗೆ ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಕಾಪು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಅಪಘಾತಕ್ಕೊಳಗಾದ ಬೈಕ್ ಮತ್ತು ಅಪಘಾತಕ್ಕೆ ಕಾರಣವಾದ ಟಿಪ್ಪರ್ ಲಾರಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Edited By :
Kshetra Samachara

Kshetra Samachara

04/03/2022 12:56 pm

Cinque Terre

15.61 K

Cinque Terre

0

ಸಂಬಂಧಿತ ಸುದ್ದಿ