ವಿಟ್ಲ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ತಂದೆ ಮಗನಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರ ಸಮೀಪದ ಕೆರೆ ಬಳಿ ಸಂಭವಿಸಿದೆ.
ಗಡಿಯಾರ ನಿವಾಸಿ ದಿನೇಶ್ ಶೆಟ್ಟಿ ಅವರ ಪುತ್ರ, 6ನೇ ತರಗತಿ ವಿದ್ಯಾರ್ಥಿ ಅದ್ವಿತ್(11) ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ. ಆತನ ತಂದೆ ದಿನೇಶ್ ಅವರು ಗಾಯಗೊಂಡಿದ್ದಾರೆ. ಬುಡೋಳಿಯ ವಿಸ್ಡ್ ಮ್ ಶಾಲೆಯ ಆರನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿ ಸಂಜೆ ಶಾಲೆ ಬಿಟ್ಟು ತನ್ನ ತಂದೆ ಜತೆ ದ್ವಿಚಕ್ರ ವಾಹನದಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಡಿಕ್ಕಿ ಹೊಡೆದು ಪರಾರಿಯಾಗಿದೆ. ಗಂಭೀರ ಗಾಯಗೊಂಡ ಬಾಲಕನನ್ನು ತುಂಬೆ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ದಿನೇಶ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪರಾರಿಯಾಗಿದ್ದ ಲಾರಿಯನ್ನು ನೆಲ್ಯಾಡಿ ಎಂಬಲ್ಲಿ ಸ್ಥಳೀಯರು ಪತ್ತೆ ಹಚ್ಚಿದ್ದಾರೆ. ಘಟನೆಯಲ್ಲಿ ಸ್ಕೂಟರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
Kshetra Samachara
07/03/2022 05:58 pm